ನವದೆಹಲಿ:
ಕೊರೋನಾ ನಿಯಂತ್ರಣದ ಸಲುವಾಗಿ ಕೇಂದ್ರ ಸರ್ಕಾರ ಇದೀಗ ಲಾಕ್ ಡೌನ್ ವಿಸ್ತರಿಸಿದ್ದು ಆರೆಂಜ್ ಮತ್ತು ಗ್ರೀನ್ ಜೋನ್ ಗಳಲ್ಲಿ ಕೆಲವೊಂದು ವಿನಾಯ್ತಿಗಳನ್ನು ನೀಡಿ ಆದೇಶ ಹೊರಡಿಸಿದೆ .
ರೆಡ್ ಜೋನ್ ನಲ್ಲಿರುವ ದೇಶದ 130 ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಯಲ್ಲಿರಲಿದೆ. ಇದರಲ್ಲಿ ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಜಿಲ್ಲೆಗಳು ಸೇರಿವೆ. ಮೇ 4ರಿಂದ ಎಲ್ಲಾ ಜೋನ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ ಸಾರ್ವಜನಿಕವಾಗಿ ಮದ್ಯ ಸೇವನೆ ಮಾಡುವಂತಿಲ್ಲ. ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ