ಬೆಂಗಳೂರು:
ಕೋವಿಡ್ 19 ನಿಯಂತ್ರಣ ಹಾಗೂ ಲಾಕ್‌ಡೌನ್ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದರು.ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಯಿತು. ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸಲು ತಿಳಿಸಲಾಯಿತು.
ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಸೂಚಿಸಲಾಯಿತು.
ಲಾಕ್‌ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು.ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
