ಸ್ವಗ್ರಾಮಗಳಿಗೆ ಹೊರಟ ವಲಸೆ ಕಾರ್ಮಿಕರು

ಗುಬ್ಬಿ

    ರಾಜ್ಯದ ವಿವಿಧ ಭಾಗಗಳಿಂದ ತಾಲ್ಲೂಕಿನ ಹಲವು ಕಡೆಗಳಲ್ಲಿ ರಸ್ತೆ ಕಾಮಗಾರಿ, ರೈಲ್ವೆ ಕಾಮಗಾರಿ ಸೇರಿದಂತೆ ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಕೊರೋನಾದಿಂದ ಭಾರತ ಲಾಕ್ ಔಟ್ ಆಗಿದ್ದರಿಂದ ಕಳೆದ ಒಂದು ತಿಂಗಳಿನಿಂದಲೂ ಟೆಂಟ್‍ಗಳಲ್ಲಿ ಬದುಕು ನಡೆಸುವಂತಾಗಿತ್ತು. ಸರ್ಕಾರದ ಆದೇಶದ ಮೇರೆಗೆ ತಹಸೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ್ ಕಾರ್ಮಿಕರು ತಮ್ಮ ಸ್ವಂತ ಗ್ರಾಮಗಳಿಗೆ ತೆರಳಲು ವಾಹನ ವ್ಯವಸ್ಥೆ ಮಾಡಿ ತಾಲ್ಲೂಕು ಆಡÀಳಿತದ ವತಿಯಿಂದ ಅನುಮತಿ ಪತ್ರವನ್ನು ನೀಡಿ ಕಳುಹಿಸಿಕೊಟ್ಟರು.

    ಸ್ವಂತ ಗ್ರಾಮಗಳಿಗೆ ತೆರಳುವ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಿಕೊಂಡು ಸುರಕ್ಷಿತವಾಗಿ ಪ್ರಯಾಣ ಮಾಡುವಂತೆ ತಿಳಿಸಿದ ಅವರು, ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿ ಗ್ರಾಮದ ಬಳಿ ರಸ್ತೆ ಕೆಲಸಕ್ಕೆ ಬಂದಿದ್ದ ಉತ್ತರ ಕರ್ನಾಟಕದ 6 ಕುಟುಂಬಗಳು, ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಬಳಿ ನೆಲೆಸಿದ್ದ ಮೈಸೂರು ಜಿಲ್ಲೆ ಹುಣಸೂರು ಗ್ರಾಮದ ಕುಟುಂಬಗಳು ಮತ್ತು ಮಣ್ಣೆಮಾರಿ ಕಾವಲ್ ಗ್ರಾಮದ ಬಳಿ ನೆಲೆಸಿದ್ದ ಕಾರ್ಮಿಕ ಕುಟುಂಬಗಳನ್ನು ಅವರ ಸ್ವಗ್ರಾಮಗಳಿಗೆ ತೆರಳಲು ತಾಲ್ಲೂಕು ಆಡಳಿತದಿಂದ ಅನುಮತಿ ಪತ್ರ ನೀಡಿ ವಾಹನಗಳಲ್ಲಿ ಸಾಮಾಜಿಕ ಅಂತರದಲ್ಲಿ ಕಳುಹಿಸಿಕೊಡಲಾಗಿದೆ. ಇನ್ನು ತಾಲ್ಲೂಕಿನ ಇತರೆ ಕಡೆಗಳಲ್ಲಿ ನೆಲೆಸಿರುವ ಕೂಲಿ ಕಾರ್ಮಿಕರನ್ನು ಹಂತ ಹಂತವಾಗಿ ಅವರ ಸ್ವಗ್ರಾಮಗಳಿಗೆ ಕಳುಹಿಸಿಕೊಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link