ಬೆಂಗಳೂರು:
ಲಾಕ್ಡೌನ್ ನಡುವೆಯೂ ಬೆಂಗಳೂರಲ್ಲಿ ರಕ್ತ ಹರಿದಿದೆ. ರೌಡಿ ಶೀಟರ್ ಒಬ್ಬನ ಬರ್ಬರ ಹತ್ಯೆ ನಡೆದಿದೆ. ಬುಜ್ಜು ಅಲಿಯಾಸ್ ಬುಜ್ಜಿ ಹತ್ಯೆಯಾದ ರೌಡಿ ಶೀಟರ್. ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ ಹಿಂದೆ ರೌಡಿ ಡ್ಯಾನಿಯಲ್ ಸಂಬಂಧಿ ಸ್ಟಾಲಿನ್ ಹತ್ಯೆಯಲ್ಲಿ ಬುಜ್ಜು ಭಾಗಿಯಾಗಿದ್ದ ಎನ್ನಲಾಗಿದೆ. ಸ್ಟಾಲಿನ್ ಹತ್ಯೆ ಬಳಿಕ ಆತನ ಸಹಚರರು ಬುಜ್ಜು ಸಹೋದರ ವಿನೋದ್ನನ್ನು ಹತ್ಯೆಗೈದಿದ್ದರು. ಬಳಿಕ ಎರಡು ಕಡೆ ಒಂದೊಂದು ಹತ್ಯೆಯಾಗಿದೆ. ಹೀಗಾಗಿ ಇಬ್ಬರೂ ಸೈಲೆಂಟ್ ಆಗಿರೋಣ ಎಂದು ಸಂಧಾನ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ರೌಡಿ ಶೀಟರ್ ಬುಜ್ಜು ಹತ್ಯೆಯಾಗಿದೆ. ಹಳೆಯ ದ್ವೇಷ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಈ ಅಂಶಗಳನ್ನು ಗಮನಿಸಿದರೆ ರೌಡಿ ಡ್ಯಾನಿಯಲ್ ಸಹಚರರಿಂದಲೇ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈ ಬಗ್ಗೆ ತನಿಖೆಯ ನಂತರವಷ್ಟೇ ಮಾಹಿತಿ ತಿಳಿದುಬರಬೇಕಿದೆ. ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
