ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ 1 ಲಕ್ಷ ಕೋಟಿ!!

ನವದೆಹಲಿ : 

      ಮಹಾಮಾರಿ ಕರೊನಾ ವೈರಸ್ ತಡೆಗಟ್ಟಲು ಹೇರಲಾಗಿರುವ ಲಾಕ್​ಡೌನ್​ನಿಂದ ಕುಸಿತಕ್ಕೊಳಗಾಗಿರುವ ದೇಶದ ಆರ್ಥಿಕತೆಗ ಬಲ ತುಂಬಲು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಹಿಂದೆ ಘೋಷಿಸಿದ್ದ 20 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಪ್ಯಾಕೇಜ್ ನ ಮೊದಲ ವಿವರಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊನ್ನೆ(ಬುಧವಾರ) ಮತ್ತು ಎರಡನೇ ಹಂತದ ವಿವರಗಳನ್ನು ನಿನ್ನೆ (ಗುರುವಾರ) ನೀಡಿದ್ದರು. ಇಂದು ಇತರೆ ಕ್ಷೇತ್ರಗಳಿಗೆ ಏನು ಸಿಗಲಿದೆ ಎಂಬುದನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸುತ್ತಿದ್ದಾರೆ.

ಆರ್ಥಿಕ ಪ್ಯಾಕೇಜ್ ನ ಮುಖ್ಯಾಂಶಗಳು: 

  • ಕೃಷಿ ಮೂಲ ಸೌಕರ್ಯಕ್ಕೆ 1 ಲಕ್ಷ ಕೋಟಿ ರೂಪಾಯಿಗಳ ಘೋಷಣೆ. 
  • ಕೃಷಿ ಉತ್ಪನ್ನಗಳ ಸಾಗಾಟಕ್ಕೆ 10 ಲಕ್ಷ ರೂಪಾಯಿಗಳು ಮೀಸಲು. 
  • ಕಳೆದ 2 ತಿಂಗಳುಗಳಲ್ಲಿ ಕೃಷಿ ಕ್ಷೇತ್ರದ 11 ವಿಭಾಗಗಳನ್ನು ಬಲಗೊಳಿಸಲು ಕೇಂದ್ರ ಸರಕಾರ ಹಲವಾರು ಉಪಕ್ರಮಗಳನ್ನು ತೆಗೆದುಕೊಂಡಿದೆ.
  • ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಕಳೆದ ಬಜೆಟ್ ಸಂದರ್ಭದಲ್ಲಿ ಘೋಷಿಸಲಾಗಿತ್ತು. ಇದರಡಿಯಲ್ಲಿ 20 ಲಕ್ಷ ಕೋಟಿ ರೂಪಾಯಿಗಳನ್ನು ಘೋಷಿಸಲಾಗುತ್ತದೆ. ಈ ಮೂಲಕ 65 ಲಕ್ಷ ಜನರಿಗೆ ಮತ್ಸ್ಯೋದ್ಯಮ ಕ್ಷೇತ್ರದಲ್ಲಿ ಉದ್ಯೋಗವಕಾಶವನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ.
  • ಲಾಕ್ ಡೌನ್ ಅವಧಿಯಲ್ಲಿ ಕನಿಷ್ಟ ಬೆಂಬಲ ಬೆಲೆಯಲ್ಲಿ 74,300 ಕೋಟಿ ರೂಪಾಯಿಗಳ ಉತ್ಪನ್ನಗಳ ಖರೀದಿ.
  • 53 ಕೋಟಿ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ರೋಗನಿರೋಧಕ ಲಸಿಕೆ
  • ಡೈರಿ ಉತ್ಪನ್ನಗಳಿಗಾಗಿ 15 ಸಾವಿರ ಕೋಟಿ ರೂ.ಬಿಡುಗಡೆ
  • ಜೇನು ಸಾಕಾಣಿಕೆಗೆ 500 ಕೋಟಿ ರೂ. ಮೀಸಲು
  • ಮೀನುಗಾರಿಕೆಗೆ 20 ಸಾವಿರ ಕೋಟಿ ರೂ.ನೆರವು

  • ಅಗತ್ಯ ವಸ್ತುಗಳ ಸಂಗ್ರಹಕ್ಕೆ ಯಾವುದೇ ಮಿತಿಯಿಲ್ಲ
  • ಇ-ಟ್ರೆಂಡಿಂಗ್​ ಮೂಲಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ
  • ತರಕಾರಿ ಸಂಗ್ರಹಣೆಗೆ 500 ಕೋಟಿ ಮೀಸಲು
  • ಪಶುಸಂಗೋಪನೆಗೆ 15 ಸಾವಿರ ಕೋಟಿ ರೂ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link