ಬೆಂಗಳೂರು:
ರಾಜ್ಯದಲ್ಲಿ ಇಂದು ಒಟ್ಟು 149 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಮಧ್ಯಾನದ ವೇಳೆಗೆ 127 ಸೋಂಕಿತರು ಪತ್ತೆಯಾಗಿದ್ದರು. ಇದೀಗ ಸಂಜೆ ವೇಳೆಗೆ ಹೊಸದಾಗಿ 22 ಕೇಸುಗಳು ಪತ್ತೆಯಾಗಿದ್ದು ಒಟ್ಟು 149 ಪ್ರಕರಣಗಳಾಗಿವೆ.
ಮಂಡ್ಯದಲ್ಲಿ ಇಂದು ಒಂದೇ ದಿನ 71 ಮಂದಿಗೆ ಸೋಂಕು ತಗುಲಿದೆ. ಇನ್ನು ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 13, ಬೆಂಗಳೂರು 12, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 2, ಗದಗ, ಯಾದಗಿರಿ, ವಿಜಯಪುರ ಮತ್ತು ಚಿತ್ರದುರ್ಗ 1 ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಒಟ್ಟು 149 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/coronaaa.gif)