ಗ್ಯಾಸ್ ರೀಫಿಲ್ಲಿಂಗ್ ಕೇಂದ್ರಗಳ ಮೇಲೆ ದಾಳಿ 6 ಮಂದಿ ಸೆರೆ

ಬೆಂಗಳೂರು

     ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಕೇಂದ್ರಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಆರು ಮಂದಿ ಆರೋಪಿಗಳನ್ನುಬಂಧಿಸಿ 3.73 ಲಕ್ಷ ರೂ. ಮೌಲ್ಯದ 384 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಸಿದ್ಧಾರ್ಥ ಲೇಔಟ್‌ನ ರಾಜು (32), ನಾಗರಭಾವಿ ಮಾರುತಿ ನಗರದ ಅಮರ್ ಸಿ.ಎ (32), ಹೆಗ್ಗನಹಳ್ಳಿ ಮುಖ್ಯರಸ್ತೆಯ ಲಕ್ಷ್ಮಯ್ಯ ಎಚ್ , ನಾಗರಬಾವಿ ಅನ್ನಪೂರ್ಣೇಶ್ವರಿ ನಗರದ ವಿನಯ್, ಆರ್.ಆರ್.ನಗರದ ಹಲಗೆವಡೆರಹಳ್ಳಿಯ ಪ್ರಕಾಶ್, (34),ರಾಜಗೋಪಾಲನಗರದ ತಿಮ್ಮಪ್ಪ (42) ಬಂಧಿತ ಆರೋಪಿ ಗಳಾಗಿದ್ದಾರೆ.

      ಆರೋಪಿಗಳಿಂದ 3,73,150 ರೂ. ಬೆಲೆಬಾಳುವ 384 ಸಿಲಿಂಡರ್‌, ರೀಫಿಲ್ಲಿಂಗ್ ರಾಡುಗಳು,ತೂಕದ ಯಂತ್ರಗಳು ಸೇರಿದಂತೆ ಕೃತ್ಯಕ್ಕೆ ಬಳಸುತ್ತಿದ್ದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ‌ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

      ಬೇರೆ ಬೇರೆ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಯಾವುದೇ ಸುರಕ್ಷತೆ ಕ್ರಮಗಳನ್ನು ಅನುಸರಿಸದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ರೀಫಿಲ್ಲಿಂಗ್‌ ಮಾಡಿಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ , ಪೀಣ್ಯ, ಕೆಂಗೇರಿ, ಕಾಮಾಕ್ಷಿಪಾಳ್ಯ, ವಿಜಯನಗರ, ಆರ್‌.ಆರ್.ನಗರ ಹಾಗೂ ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮವಾಗಿ ಪೀಣ್ಯ, ಕೆಂಗೇರಿ, ಪಾಮಾಕ್ಷಿಪಾಳ್ಯ, ವಿಜಯನಗರ, ಆರ್.ಆರ್.ನಗರ ಹಾಗೂರಾಜಗೋಪಾಲ ನಗರ ಪೊಲೀಸ್ ಠಾಣೆಗಳಲ್ಲಿ 6 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link