ಬೀದರ್:
ಕ್ವಾರಂಟೈನ್‍ನಲ್ಲಿದ್ದ ಯುವಕನೊಬ್ಬ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.
ನಾರಾಯಣಪುರ ಗ್ರಾಮದ ಸಚಿನ್ ತೇಜೆರಾವ್ ಜಾಧವ್ (21) ಮೃತ. ಈಗಾಗಲೇ ಯುವಕ ಜಾದವ್‍ಗೆ ಮದುವೆಯಾಗಿದ್ದು, ಮೇ 19ರಂದು ಪತ್ನಿ ಜತೆ ಸಚಿನ್ ತೇಜೆರಾವ್ ಮುಂಬೈನಿಂದ ಆಗಮಿಸಿದ್ದ. ಹಾಗಾಗಿ ಇವರಿಬ್ಬರನ್ನೂ ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮ ಹೊರವಲಯದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.
ಆದರೆ, ಮಂಗಳವಾರ ಬೆಳಗಿನ ಜಾವ ಸಚಿನ್ ತೇಜೆರಾಜ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ತಡರಾತ್ರಿವರೆಗೂ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು ಎಂಬ ಮಾಹಿತಿ ಇದೆ.
ಸ್ಥಳಕ್ಕೆ ಔರಾದ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ