ಕೋಲಾರ:
ಸಲೂನ್ ಒಂದರಲ್ಲಿ ಕೊರೊನಾ ಸೋಂಕಿತ ಕಟಿಂಗ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಲೂನ್ ಶಾಪ್ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ.
ಮಲೇಶಿಯಾದಿಂದ ಮೇ 29ರಂದು ಬಂಗಾರಪೇಟೆಗೆ ಹಿಂದಿರುಗಿದ ಯುವಕ ಭಾನುವಾರ ಬೆಳಗ್ಗೆ ಹೇರ್ ಕಟಿಂಗ್ ಮಾಡಿಸಿದ್ದನು. ಮೇ 31 ರಂದೇ ಆತನಿಗೆ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.
ಅದಾದ ನಂತರ ಸುಮಾರು 15ಕ್ಕೂ ಹೆಚ್ಚು ಜನ ಹೇರ್ ಕಟ್ ಮಾಡಿಸಿಕೊಳ್ಳಲು ಹೋಗಿದ್ದು, ಅವರಿಗಾಗಿ ಅಧಿಕಾರಿಗಳು ಹುಡುಕಾಟ ಮಾಡುತ್ತಿದ್ದಾರೆ. ಅಲ್ಲದೇ ಆ ದಿನ ಯಾರೆಲ್ಲಾ ಶೇವಿಂಗ್ ಮತ್ತು ಕಟಿಂಗ್ ಮಾಡಿಸಿಕೊಂಡಿದ್ದಾರೋ ಅವರೆಲ್ಲ ಕೂಡಲೇ ಸರ್ಕಾರಿ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಬೇಕೆಂದು ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಪಟ್ಟಣದ ಬೀದಿ ಬೀದಿಯಲ್ಲಿ ಮೈಕ್‍ನಲ್ಲಿ ಅನೌನ್ಸ್ ಮಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಈವರೆಗೆ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದುವರೆಗೂ ಐವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ