ಬೆಂಗಳೂರು :
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ ನೋಟಿಸ್ ಜಾರಿಮಾಡಿದೆ.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಆಸ್ತಿ ವಿವರದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಅರ್ಜಿಯ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ ಎಂಬ ಆರೋಪ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಪ್ರಕರಣ ವಜಾಗೊಳಿಸಿ ಆದೇಶಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಎ.ಮಂಜು ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯರ ನ್ಯಾಯಪೀಠ, ಪ್ರಜ್ವಲ್ ರೇವಣ್ಣಗೆ ಈ ಸಂಬಂಧ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Prajwal-Revanna.gif)