ಬೆಂಗಳೂರು:
ಸುಪ್ರಸಿದ್ಧ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದರ್ಶನಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿರುವ ಆಡಳಿತ ಮಂಡಳಿ ದಿಟ್ಟ ಕ್ರಮ ಕೈಗೊಂಡಿದೆ.
ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂನ್ 8 ರಿಂದ ದೇವಾಲಯಗಳನ್ನು ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದರೂ, ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಭಕ್ತರ ದರ್ಶನಕ್ಕೆ ಬ್ರೇಕ್ ಹಾಕಿದೆ.
ಕೊರೊನಾ ಸೋಂಕು ತಡೆಗಟ್ಟಲು ದೇವಾಲಯದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಹೆಚ್ಚಿನ ಕಾಲಾವಕಾಶ ಬೇಕಿರುವುದರಿಂದ ದೇಗುಲಕ್ಕೆ ಆಗಮಿಸುವ ಭಕ್ತರು ಮತ್ತು ಸಿಬ್ಬಂದಿ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ದೇವರ ದರ್ಶನ, ಪೂಜೆ ಮತ್ತು ವಾಸ್ತವ್ಯದ ಅವಕಾಶಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.
ಲಾಕ್ ಡೌನ್ ವೇಳೆಯಲ್ಲಿ ನಡೆಸುತ್ತದ್ದಂತೆಯೇ ಫೇಸ್ ಬುಕ್ ನಲ್ಲಿ ಲೈವ್ ನಲ್ಲಿ ಆನ್ ಲೈನ್ ಮಂಗಳಾರತಿ ದರ್ಶನದ ವ್ಯವಸ್ಥೆಯನ್ನು ಮುಂದುವರಿಸಲಾಗುವುದು. ಜನರು ದೇವಾಲಯದ ವೆಬ್ ಸೈಟ್ ಇಲ್ಲವೇ ಕಚೇರಿಗೆ ನೇರ ಕರೆ ಮಾಡಿ ಸೇವೆಗಳನ್ನು ಮಾಡಿಸಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಭಕ್ತರ ಹಿತದೃಷ್ಟಿ ಹಾಗೂ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
