ನವದೆಹಲಿ:
ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ 9,971 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2.46 ಲಕ್ಷಕ್ಕೇರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 9,971 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,46,628ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸಾವಿನ ಸಂಖ್ಯೆ ಕೂಡ 7 ಗಡಿಯತ್ತ ಸಾಗಿದ್ದು, ಈ ವರೆಗೂ ಹೆಮ್ಮಾರಿ ವೈರಸ್’ಗೆ 6,929 ಮಂದಿ ಬಲಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
