ನವದೆಹಲಿ:
ಭಾರತದಲ್ಲಿ ಕೋವಿಡ್ ಅಟ್ಟಹಾಸಕ್ಕೆ 7 ಸಾವಿರಕ್ಕೂ ಅಧಿಕ ಸೋಂಕಿತರು ಬಲಿಯಾಗಿದ್ದು, ಪ್ರಕರಣಗಳ ಸಂಖ್ಯೆ ಎರಡೂವರೆ ಲಕ್ಷದ ಗಡಿ ದಾಟಿದೆ.
ಕೇಂದ್ರದ ಪ್ರಕಾರ ಒಟ್ಟು 2,54,242 ಸೋಂಕಿತರ ಪೈಕಿ 1,22,738 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗೆಯೇ ಇನ್ನುಳಿದ 124,387 ಮಂದಿಗೆ ಕೋವಿಡ್-19 ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ 7,117 ಜನ ಮಾರಕ ಸೋಂಕಿಗೆ ಅಸುನೀಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 9,983 ಸೋಂಕಿತರು ಪತ್ತೆಯಾಗಿದ್ದು, 206 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ 1,25,381 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ