ನವದೆಹಲಿ :
ಭಾರತದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 331 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,987 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 331 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 7,466 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2,66,598 ಕ್ಕೆ ಏರಿಕೆಯಾಗಿದೆ.
ಈ ನಡುವೆ 2,66,598 ಮಂದಿ ಸೋಂಕಿತರ ಪೈಕಿ ಸದ್ಯ ದೇಶದಲ್ಲಿ 1,29,917 ಮಂದಿ ಸೋಂಕಿನಿಂದ ಬಳಲುತ್ತಿದ್ದು, 1,29,215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ