ಲಾಕ್‍ಡೌನ್‍ ಅವಧಿ ವೇತನಕ್ಕಾಗಿ ಒತ್ತಾಯ..!

ದಾವಣಗೆರೆ:

        ವಿದ್ಯಾರ್ಥಿ ನಿಲಯ, ವಸತಿ ಶಾಲೆ, ಆಶ್ರಮ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಸುತ್ತಿರುವ ಕಾರ್ಮಿಕರಿಗೆಕೋವಿಡ್ ಲಾಕ್‍ಡೌನ್‍ಅವಧಿಯವೇತನ ಹಾಗೂ ಎಂದಿನಂತೆಜೂನ್ ತಿಂಗಳ ವೇತನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ  ದ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

      ನಗರದ ಜಿಲ್ಲಾ ಪಂಚಾಯತ್‍ ಕಚೇರಿ ಎದುರು ಜಮಾಯಿಸಿದ ವಿವಿಧ ವಸತಿ ನಿಲಯ, ವಸತಿ ಶಾಲೆಗಳಲ್ಲಿ ಕಾರ್ಯಕನಿರ್ವಹಿ ಸುತ್ತಿರುವ ಗುತ್ತಿಗೆ ಕಾರ್ಮಿಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿ ಮನವಿಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಕೈದಾಳೆ, ಕೇಂದ್ರ ಮತ್ತುರಾಜ್ಯ ಸರ್ಕಾರಗಳು ಲಾಕ್‍ಡೌನ್‍ ಅವಧಿಯಲ್ಲಿ ಎಲ್ಲಾ ಗುತ್ತಿಗೆ ಕಾರ್ಮಿಕರಿಗೂ ವೇತನ ನೀಡುವಂತೆ ಸುತ್ತೋಲೆ ಹೊರಡಿಸಿವೆ.

      ಆದರೆ, ಕೆಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ವೇತನ ನೀಡಿದರೆ, ಮತ್ತೆ ಕೆಲವು ಜಿಲ್ಲೆಗಳಲ್ಲಿ ಲಾಕ್‍ಡೌನ್‍ಅವಧಿಯ ವೇತನ ನೀಡಲು ನಿರಾಕರಿಸುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

      ಬಿಸಿಎಂ ಇಲಾಖೆಯಲ್ಲಿ ಹೆಚ್ಚುವರಿ ನೌಕರರಿಗೆ 6 ತಿಂಗಳ ವೇತನವನ್ನು ಫೆಬ್ರುವರಿ ತಿಂಗಳಲ್ಲೇ ಸರ್ಕಾರದಿಂದ ಬಿಡುಗಡೆಯಾಗಿದೆ.ಈ ಬಾಕಿ ಇರುವ ವೇತನವನ್ನು ತಕ್ಷಣವೇ ವಾವತಿಸಬೇಕು.ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಿರುವ ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಇಲಾಖೆ ಹೊರಗುತ್ತಿಗೆ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು ಎಂದು ಒತ್ತಾಯಿಸಿದರು.

     ಹೊರಗುತ್ತಿಗೆ ಕಾರ್ಮಿಕರು, ಮತ್ತವರ ಕುಟುಂಬ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರೆ ಅಂತಹವರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು.ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ವಿಶೇಷ ಜೀವ ವಿಮೆ ಸೌಲಭ್ಯ ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು.ನೇರ ನೇಮಕಾತಿಯಿಂದ ತೊಂದರೆಗೊಳಗಾದ ಗುತ್ತಿಗೆ ಕಾರ್ಮಿಕರನ್ನು ಸೇವಾ ಹಿರಿತನಕ್ಕನುಗುಣವಾಗಿ ಇತರೆ ಇಲಾಖೆಗಳ ಹುದ್ದೆಗಳಿಗೆ ನೇಮಿಸಿಕೊಳ್ಳಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನಾನಿರತರು ಆಗ್ರಹಿಸಿದರು.

     ಪ್ರತಿಭಟನೆಯ ನೇತೃತ್ವವನ್ನು ಸಂಘಟನೆ ಜಿಲ್ಲಾ ಉಪಾಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ಜಿಲ್ಲಾ ಕಾರ್ಯದರ್ಶಿ ಸ್ವಾಮಿ ನಿಂಗಪ್ಪ ಮತ್ತಿತರರು ವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link