ದೆಹಲಿ :
ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,956 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 396 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಶುಕ್ರವಾರ ಮಾಹಿತಿ ನೀಡಿದ್ದು, ಭಾರತದಲ್ಲಿ ಈಗ ಸೋಂಕಿತರ ಸಂಖ್ಯೆ 2,97,535 ಕ್ಕೆ ಏರಿಕೆಯಾಗಿದೆ. ವಿಶ್ವದ ಕೊರೊನಾ ಸೋಂಕಿತರ ರಾಷ್ಟ್ರಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದು ತಲುಪಿದೆ.
ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಷ್ಟೇ ಕ್ರಮಗಳನ್ನು ಕೈಗೊಂಡರೂ ಸಹ ಸಾರ್ವಜನಿಕರು ನಿಯಮಗಳನ್ನು ಪಾಲಿಸದೆ ತೀವ್ರ ನಿರ್ಲಕ್ಷ್ಯ ವಹಿಸುತ್ತಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳು ಕಠಿಣವಾಗಿರಲಿವೆ.
ಮುಂದಿನ ದಿನಗಳಲ್ಲಿ ಕೊರೊನಾ ಮತ್ತಷ್ಟು ಆರ್ಭಟಿಸಲಿದೆ ಎನ್ನಲಾಗುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
