ಬೆಂಗಳೂರು :
ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಹಾಗು ಬಾಲಗಂಗಾಧರನಾಥ ಸ್ವಾಮೀಜಿಗಳ ಹುಟ್ಟೂರಿನಲ್ಲಿ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಗ್ರಾಮ ಹಾಗೂ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಜನ್ಮಸ್ಥಳವಾದ ಬಾನಂದೂರು ಗ್ರಾಮಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Shivakumar-swamiji.jpg)