ನವದೆಹಲಿ :
ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 11 ಸಾವಿರಕ್ಕಿಂತ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 325 ಮಂದಿ ಮೃತಪಟ್ಟಿದ್ದಾರೆ.
ಸೋಮವಾರ ಬೆಳಿಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಬುಲೆಟಿನ್ ಪ್ರಕಾರ, ಒಂದೇ ದಿನ 325 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಇದುವರೆಗೆ 3,32,424 ಪ್ರಕರಣಗಳು ದಾಖಲಾಗಿದೆ.
325 deaths and 11,502 new #COVID19 cases reported in the last 24 hours. Total number of cases in the country now at 332424 including 153106 active cases, 169798 cured/discharged/migrated and 9520 deaths: Ministry of Health and Family Welfare pic.twitter.com/9bFgKeqrRG
— ANI (@ANI) June 15, 2020
ಸಾವಿನ ಸಂಖ್ಯೆ ಕೂಡ 95,20ಕ್ಕೆ ಏರಿಕೆಯಾಗಿದೆ. 3.32 ಲಕ್ಷ ಮಂದಿ ಸೋಂಕಿತರ ಪೈಕಿ 1,69,798 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ಇನ್ನೂ ದೇಶದಲ್ಲಿ 153106 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ ಸೋಂಕಿತರ ಪೈಕಿ ಮಹಾರಾಷ್ಟ್ರ ರಾಜ್ಯದ ಪಾಲೇ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ ಆ ರಾಜ್ಯದಲ್ಲಿ 3390 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,07,958ಕ್ಕೆ ಮುಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ