ನವದೆಹಲಿ :
ಭಾರತ ಚೀನಾ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷದಲ್ಲಿ ಮೂವರು ಭಾರತೀಯರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.
ಭಾರತ-ಚೀನಾ ಗಡಿಯ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತದ ವ್ಯಾಪ್ತಿಯೊಳಗೆ ಅತಿಕ್ರಮಣ ಪ್ರವೇಶ ಮಾಡಿದ್ದ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿಯ ಯೋಧರು ದಾಳಿ ಮಾಡಿದ್ದು, ಚೀನಾ-ಭಾರತ ಸೈನಿಕರ ನಡುವೆ ಸಂಘರ್ಷ ನಡೆದಿದ್ದು, ಭಾರತದ ಓರ್ವ ಅಧಿಕಾರಿ ಸೇರಿದಂತೆ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.
ಇನ್ನು ಭಾರತ-ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಶಾಂತಗೊಳಿಸಲು ಭಾರತ-ಚೀನಾ ಹಿರಿಯ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ