ಬೆಂಗಳೂರು:
ವಿಧಾನಪರಿಷತ್ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಕಾಂಗ್ರೆಸ್ ಹೈಕಮಾಂಡ್ ಫೈನಲ್ ಮಾಡಿದ್ದು, ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಹೆಸರನ್ನು ಘೋಷಣೆ ಮಾಡಿದೆ.
ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ಗೆ 7 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ನಸೀರ್ ಅಹ್ಮದ್ ಹೆಸರು ನಿರೀಕ್ಷಿತವಾಗಿತ್ತು ಆದರೆ ಬಿ.ಕೆ.ಹರಿಪ್ರಸಾದ್ ಅವರ ಹೆಸರು ಅಚ್ಚರಿಗೆ ಕಾರಣವಾಗಿದ್ದು, ರಾಜ್ಯಸಭೆ ಟಿಕೆಟ್ ಮಿಸ್ ಆದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ಗೆ ಮಣೆ ಹಾಕಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
ಕಾಂಗ್ರೆಸ್ ಪಕ್ಷದ 2 ಸೀಟುಗಳಿಗೆ 200ಕ್ಕೂ ಅಧಿಕ ಆಕಾಂಕ್ಷಿಗಳಿದ್ದರು. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಂಗಳವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿದ್ದರು. ಬುಧವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.