ಬೆಂಗಳೂರು
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ.ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ.
ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.ಇದೇ ತಿಂಗಳ 29ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ನಿಂದ ಹಲವು ನಾಯಕರು ಟಿಕೆಟ್ಗಾಗಿ ಪ್ರಯತ್ನಿಸಿದ್ದರು. ಕಾಂಗ್ರೆಸ್ ರಾಜ್ಯ ನಾಯಕರು ಸಭೆ ನಡೆಸಿ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಿದ್ದರು.
ಇದೀಗ ಎಐಸಿಸಿ ಬಿ.ಕೆ.ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರಿಗೆ ಟಿಕೆಟ್ ನೀಡಿದೆ. ರಾಜ್ಯಸಭೆಯ ಸದಸ್ಯರಾಗಿದ್ದ ಬಿ.ಕೆ.ಹರಿಪ್ರಸಾದ್ ಅವರ ಅವಧಿ ಇತ್ತೀಚೆಗಷ್ಟೆ ಮುಕ್ತಾಯಗೊಂಡಿತ್ತು. ಆದರೆ ಅವರನ್ನು ಮರು ನೇಮಕ ಮಾಡಿರಲಿಲ್ಲ. ಆ ಸ್ಥಾನವನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿತ್ತು. ಇದೀಗ ಅವರಿಗೆ ವಿಧಾನ ಪರಿಷತ್ನಲ್ಲಿ ಸ್ಥಾನ ಕಲ್ಪಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ನಸೀರ್ ಅಹ್ಮದ್ ಅವರು ಈ ಹಿಂದೆಯೂ ವಿಧಾನ ಪರಿಷತ್ ಸದಸ್ಯರಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








