ಗುಬ್ಬಿ
ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಕೋವಿಡ್ ಮಾರ್ಗ ಸೂಚಿಯಂತೆ ಯಶಸ್ವಿಯಾಗಿ ನಡೆಸಲು ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸಿಂಗ್ ಮಾಡುವುದರ ಜೊತೆಗೆ, ಕೊಠಡಿಗಳನ್ನು ಸ್ವಚ್ಛಗೊಳಿಸಿ ಎಲ್ಲಾ ರೀತಿಯಿಂದಲೂ ಸಿದ್ದಗೊಳಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ, ಥರ್ಮಲ್ ಸ್ಕ್ಯಾನಿಂಗ್ ಜೊತೆಗೆ ಕೈಗಳಿಗೆ ಸ್ಯಾನಿಟೈಸರ್ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಮಾಡುವಂತೆ ಶಾಸಕ ಎಸ್.ಆರ್.ಶ್ರೀನಿವಾಸ್ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಾ ಕೊಠಡಿಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳಿಗೆ ವಿತರಿಸಲು ಮಾಸ್ಕ್‍ಗಳನ್ನು ಉಪಪ್ರಾಂಶುಪಾಲರಿಗೆ ವಿತರಿಸಿ ಮಾತನಾಡಿದ ಅವರು, ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿಯೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ರೀತಿಯ ಅಗತ್ಯ ಪೂರ್ವ ಭಾವಿ ಸಿದ್ದತೆಗಳನ್ನು ಮಾಡಿಕೊಂಡು ಪರೀಕ್ಷೆಗಳನ್ನು ನಿಯಮಾನುಸಾರ ಸುವ್ಯವಸ್ಥಿತವಾಗಿ ನಡೆಸುವಂತೆ ಕರೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಮಾತನಾಡಿ, ಈಗಾಗಲೇ ತಾಲ್ಲೂಕಿನ 14 ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸ್ಯಾನಿಟೈಸಿಂಗ್ ಮಾಡಿ ಸ್ವಚ್ಛಗೊಳಿಸಲು ಆಯಾ ಗ್ರಾಮ ಪಂಚಾಯ್ತಿಗಳಿಗೆ ತಿಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಈ ಬಗ್ಗೆ ಸೂಕ್ತವಾದ ಕ್ರಮಗಳನ್ನು ಕೈಗೊಂಡು ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರುಗಳಾದ ಕುಮಾರ್, ರೇಣುಕಾಪ್ರಸಾದ್, ಉಪಪ್ರಾಂಶುಪಾಲರಾದ ಭವ್ಯ, ಮುಖಂಡ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ