ರಾಯಚೂರು:
ಮಗನನ್ನು ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದ ಶಿಕ್ಷಕ ಬೈಕ್ ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗಬ್ಬೂರ ಗ್ರಾಮದ ಬಳಿ ನಡೆದಿದೆ.
ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮಗನನ್ನು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲೆಂದು ಬೈಕ್ನಲ್ಲಿ ಕರೆದುಕೊಂಡು ಹೋಗುವ ವೇಳೆ ಆಕಳು ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿದೆ. ಕೆಳಗೆ ಬಿದ್ದ ನಾಗಾರೆಡ್ಡಿ(53) ತಲೆಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ವಿದ್ಯಾರ್ಥಿ ಕೂಡ ಗಾಯಗೊಂಡಿದ್ದಾನೆ. ಮೃತ ನಾಗಾರೆಡ್ಡಿ ಸುಕೇಶ್ವರಹಾಳ ಗ್ರಾಮದ ಶಾಲೆಯಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ