ಕೊರೋನಾ ನಿಯಂತ್ರಣ: ಎರಡು ಕಾರ್ಯತಂಡ ರಚನೆ..!

ಬೆಂಗಳೂರು

   ಕೋವಿಡ್-19 ನಿಯಂತ್ರಣಕ್ಕಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕು ತಡೆಯುವ ವ್ಯವಸ್ಥೆಯ ಮೇಲೆ ಕಣ್ಗಾವಲು ಇಡಲು ಎರಡು ಹೊಸ ಕಾರ್ಯತಂಡಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

   ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಜೋಡಿಸಲಾಗಿರುವ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ ವ್ಯವಸ್ಥೆ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್ ನೇತೃತ್ವದ ಸಮಿತಿ ರಚಿಸಲಾಗಿದೆ.

  ತಂಡದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಉಪಕುಲಪತಿ ಡಾ.ಸಚ್ಚಿದಾನಂದ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ್, ಆಯುಷ್ ಇಲಾಖೆ ಆಯುಕ್ತ ಮೀನಾಕ್ಷಿ ನೇಗಿ ಸದಸ್ಯರಾಗಿರಲಿದ್ದಾರೆ.

   ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ಕಲ್ಪಿಸಲು ಜಲಮಂಡಳಿಯ ಎನ್.ಜಯರಾಂ ನೇತೃತ್ವದ ಸಮಿತಿ ರಚಿಸಲಾಗಿದ್ದು, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ, ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ, ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಸದಸ್ಯರಾಗಿದ್ದಾರೆ.

   ಈ ತಂಡಗಳು ಬಿಬಿಎಂಪಿ ಆಯುಕ್ತರಿಗೆ ತಮ್ಮ ಪರಿಶೀಲನೆಯ ವರದಿ ಸಲ್ಲಿಸಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾದ ಟಿ.ಎಂ.ವಿಜಯ ಭಾಸ್ಕರ್ ಆದೇಶ ಹೊರಡಿಸಿದ್ದಾರೆ

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap