ಅನಂತ್ ನಾಗ್ :
ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಖುಲ್ಚೊಹರ್ ಪ್ರದೇಶದಲ್ಲಿ ಇಂದು ನಸುಕಿನ ವೇಳೆ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಯೋಧರು ಮತ್ತು ಪೊಲೀಸರಿಂದ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಹಿಜ್ಬುಲ್ ಉಗ್ರಗಾಮಿ (ಎಚ್ಎಂ) ಸಂಘಟನೆಯ ಕುಖ್ಯಾತ ಕಮಾಂಡರ್ ಸೇರಿದಂತೆ ಮೂವರು ಉಗ್ರಗಾಮಿಗಳನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ.
ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಹಿಜ್ಬುಲ್ ಕಮಾಂಡರ್ ಮಸೂದ್ ಮತ್ತು ಇಬ್ಬರು ಲಷ್ಕರ್ ಭಯೋತ್ಪಾದಕರು ಸೇರಿದ್ದಾರೆ. ಮಸೂದ್ ದೋಡ ನಿವಾಸಿಯಾಗಿದ್ದು ಈತನ ಹತ್ಯೆ ಬಳಿಕ ಟ್ರಾಲ್ ನಂತರ, ಈಗ ದೋಡಾ ಕೂಡ ಭಯೋತ್ಪಾದಕ ಮುಕ್ತವಾಗಿದೆ.
ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ ಮೂವರು ಉಗ್ರರಿಂದ ಎಕೆ -47 ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕರಿಂದ ಎರಡು ಪಿಸ್ತೂಲ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ