ಮಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಂಗಳೂರಿನಲ್ಲಿ ಕೊರೊನಾ ಮಹಮಾರಿಗೆ ಇಂದು ಇಬ್ಬರು ಬಲಿಯಾಗಿದ್ದಾರೆ.
ಮಂಗಳೂರಿನ ಬೆಂಗ್ರೆ ನಿವಾಸಿಯಾಗಿರುವ 78 ವರ್ಷದ ಪುರುಷ ಮಧುಮೇಹ ಮತ್ತು ನ್ಯುಮೋನಿಯಾ ರೋಗದಿಂದ ಬಳಲುತ್ತಿದ್ದ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಇನ್ನು ಭಟ್ಕಳದ 31 ವರ್ಷದ ಯುವಕ ಅನಾರೋಗ್ಯದಿಂದ ನಗರದ ಎ.ಜೆ. ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ಬರುವಷ್ಟರಲ್ಲೇ ಯುವಕ ಸಾವನ್ನಪ್ಪಿದ್ದು, ಮೃತ ಯುವಕನ ಗಂಟಲಿನ ದ್ರವದ ಪರೀಕ್ಷೆ ನಡೆಸಿದ್ದು, ಪರೀಕ್ಷಾ ವರದಿಯಲ್ಲಿ ಯುವಕನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಎರಡು ಮರಣ ಪ್ರಕರಣಗಳಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 16 ಕ್ಕೇರಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ