ಚಿಕ್ಕಮಗಳೂರು
ರಾಜ್ಯದಲ್ಲಿ ಕೊರೊನಾ ಸೋಂಕು ನಿವಾರಣೆಗಾಗಿ ಯಾವುದೇ ರೀತಿಯಲ್ಲೂ ಹಣದ ಸಮಸ್ಯೆ ಇಲ್ಲ. ಸರ್ಕಾರದ ಖಜಾನೆಯಲ್ಲಿ 300 ಕೋಟಿ ರೂ ಗೂ ಹೆಚ್ಚಿನ ಹಣ ಲಭ್ಯವಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.ಕಂದಾಯ ಇಲಾಖೆ ಹಾಗೂ ವಿಪತ್ತು ನಿರ್ವಹಣೆ ನಿಧಿಯಿಂದ ಮೊದಲ ಹಂತದಲ್ಲಿ 382 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಪ್ರಸ್ತುತ 300 ಕೋಟಿ ರೂಪಾಯಿಗೂ ಅಧಿಕ ಹಣ ಸರ್ಕಾರದ ಬಳಿ ಲಭ್ಯವಿದೆ ಎಂದು ಹೇಳಿದರು.
ಎರಡು ದಿನಗಳ ಕಾಲ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದ ಅವರು ತಮ್ಮ ಪ್ರವಾಸದ ಕೊನೆಯ ದಿನವಾದ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕತೆ, ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಲ್ಲಿ ಸರ್ಕಾರದ ಬಳಿ ಇರುವ ಹಣವನ್ನು ಸದುಪಯೋಗ ಪಡಿಸಿಕೊಳ್ಳಲಾಗುವುದು. ಈ ಹಣವನ್ನು ಕೊರೊನಾ ಸೋಂಕಿನ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸರಾಗವಾಗಿ ನಡೆಯುವಂತಾಗಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸೋಂಕು ನಿಯಂತ್ರಣಕ್ಕೆ ಜನತೆ ನಿಯಮಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.
ಹೊರ ಕೆಲವು ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಸೋಂಕಿನ ಪ್ರಮಾಣ ಕಡಿಮೆ ಇದ್ದು ರಾಜ್ಯ ಸರ್ಕಾರ ಸೋಂಕು ತಡೆಗೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಅಶೋಕ್ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ