ದೇಶದಲ್ಲಿ ಒಂದೇ ದಿನ 22,771 ಮಂದಿಗೆ ಸೋಂಕು!!

ನವದೆಹಲಿ:

     ದೇಶದಾದ್ಯಂತ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಶನಿವಾರ ಒಂದೇ ದಿನದಲ್ಲಿ 22,771 ಹೊಸ ಪ್ರಕರಣ ದಾಖಲಾಗಿದೆ.

      ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇದೇ ಮೊದಲ ಬಾರಿಗೆ 24 ಗಂಟೆಗಳಲ್ಲಿ ಇಷ್ಟೊಂದು ಪ್ರಕರಣಗಳು ಪತ್ತೆಯಾಗಿವೆ. 

      ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,48,315ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 442 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 18,655 ಆಗಿದೆ. ಒಂದೇ ದಿನ 14,335 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 3,94,227ಕ್ಕೆ ಏರಿಕೆಯಾಗಿದೆ. 2,35,433 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link