ಇಂದು ರಾತ್ರಿಯಿಂದಲೇ ಕರ್ನಾಟಕ ಕಂಪ್ಲೀಟ್ ಲಾಕ್!!

ಬೆಂಗಳೂರು :

    ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಸೂಚನೆ ನೀಡಿದ್ದು, ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.

      ಸರ್ಕಾರ ನೀಡಿರುವ ಹೊಸ ಆದೇಶದ ಪ್ರಕಾರ, ಇನ್ನುಮುಂದೆ ಪ್ರತಿ ಭಾನುವಾರ ಲಾಕ್ ಡೌನ್ ಜಾರಿಯಲ್ಲಿರಲಿದೆ. ಜುಲೈ 5, ಅಂದರೆ ನಾಳೆ ಭಾನುವಾರ ಆಗಿರುವುದರಿಂದ ನಾಳೆ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆ ವರೆಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳ ಸಂಚಾರ ಇರುವುದಿಲ್ಲ. ಜೊತೆಗೆ ಕ್ಯಾಬ್, ಆಟೋ, ವಾಣಿಜ್ಯ ಮಳಿಗೆ ಇನ್ನಿತರ ಅಂಗಡಿಗಳು ಸಂಪೂರ್ಣ ಬಂದ್ ಆಗಿರಲಿವೆ.

      ಇನ್ನು ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 9 ಗಂಟೆವರೆಗೆ ಯಾವುದೇ ಮದ್ಯದ ಅಂಗಡಿಗಳು ತೆರೆಯುವುದಿಲ್ಲ. ಎಂಆರ್‍ಪಿ, ವೈನ್‍ಸ್ಟೋರ್, ಕ್ಲಬ್, ಬಾರ್‍ಗಳ ಮೇಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ. 

     ಲಾಕ್ ಡೌನ್ ವೇಳೆ ಸುಖಾಸುಮ್ಮನೆ ಮನೆಯಿಂದ ಹೊರಬಂದರೆ ಮುಲಾಜಿಲ್ಲದೆ ಪೊಲೀಸರು ಕೇಸ್ ದಾಖಲಿಸಿ ದಂಡ ವಿಧಿಸಲಿದ್ದಾರೆ.

      ಸರಕು ಸಾಗಣಿ ಮತ್ತು ತುರ್ತು ಸೇವೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರಲಿದೆ. ಆಸ್ಪತ್ರೆ, ಮೆಡಿಕಲ್ ಶಾಪ್, ದಿನಸಿ ಅಂಗಡಿ, ಹೋಟೆಲ್ ನಲ್ಲಿ ಪಾರ್ಸೆಲ್, ತರಕಾರಿ ಅಂಗಡಿ, ಮಾಂಸದಂಗಡಿ, ಹಾಲು ಮತ್ತು ಪೊಲೀಸ್, ವೈದ್ಯಕೀಯ ಮಾಧ್ಯಮ ಸೇವೆ ಸಿಗಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link