ತುಮಕೂರು
ಮಹಾನಗರ ಪಾಲಿಕೆ ಆಯುಕ್ತರಾಗಿ ರೇಣುಕಾ ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಯೋಜನಾಧಿಕಾರಿಯಾಗಿದ್ದ ಇವರು ಸರ್ಕಾರದ ಆದೇಶದಂತೆ ಆಯುಕ್ತ ಟಿ. ಭೂಬಾಲನ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಹುದ್ದೆಗೆ ನೇಮಕಗೊಂಡು ಇಂದು ಅಧಿಕಾರವಹಿಸಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ಅಧೀಕ್ಷರ ಇಂಜಿನಿಯರ್ ಮಹೇಶ್, ಮುಖ್ಯ ಲೆಕ್ಕಾಧಿಕಾರಿ ಗುರುಬಸವೇಗೌಡ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ