ನವದೆಹಲಿ
ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಹೆಚ್ಚು ಸೋಂಕಿತ ರಾಷ್ಟ್ರಗಳ ಪೈಕಿ ರಷ್ಯಾ ದೇಶವನ್ನು ಹಿಂದಿಕ್ಕಿ, ವಿಶ್ವದಲ್ಲಿ ಮೂರನೇ ಸ್ಥಾನಕ್ಕೇರಿದೆ.
ಆರೋಗ್ಯ ಸಚಿವಾಲಯದ ಅಧಿಕೃತ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ 6 ಲಕ್ಷದ 85 ಸಾವಿರದ 110ಕ್ಕೆ ಏರಿಕೆಯಾಗಿದ್ದು, ರಷ್ಯಾಗಿಂತಲೂ 1989 ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ವರದಿಯಾಗಿದೆ.
ಜಾಗತಿಕ ಮಟ್ಟದಲ್ಲಿ ಅಮೆರಿಕಾದಲ್ಲಿ ಈವರೆಗೂ 29 ಲಕ್ಷದ 36 ಸಾವಿರದ 904 ಪ್ರಕರಣಗಳು ದಾಖಲಾಗಿದ್ದು, ಮೊದಲ ಸ್ಥಾನದಲ್ಲಿದೆ. ಭ್ರಜಿಲ್ ನಲ್ಲಿ 15 ಲಕ್ಷದ 78 ಸಾವಿರದ 376 ಪ್ರಕರಣಗಳು ವರದಿಯಾಗಿದ್ದು, ದ್ವಿತೀಯ ಸ್ಥಾನದಲ್ಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
