ಬೆಂಗಳೂರು :
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಇದೀಗ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಿದೆ.
ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ ಒಂದು ಸರ್ಕಾರಿ ಅಥವಾ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿತ್ತು. ಇದೀಗ ಅದನ್ನು ರದ್ದುಗೊಳಿಸಿದ್ದು, ಮನೆಯಲ್ಲೇ 14 ದಿನ ಕ್ವಾರಂಟೈನ್‌ಗೆ ಒಳಗಾದರೆ ಸಾಕು ಎಂದು ರಾಜ್ಯ ಸರ್ಕಾರ ಇಂದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈ ಹಿಂದೆ ರಾಜ್ಯ ಸರ್ಕಾರ ಹೊರ ರಾಜ್ಯ ಅಥವಾ ವಿದೇಶದಿಂದ ಆಗಮಿಸುವವರು ಖಡ್ಡಾಯವಾಗಿ 07 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನ ಹೋಮ್ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ನಿಯಮ ರೂಪಿಸಿತ್ತು. ಅಲ್ಲದೆ, ಕ್ವಾರಂಟೈನ್‌ಗೆ ಒಳಗಾಗುವವರೇ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಸೂಚಿಸಲಾಗಿತ್ತು. ಈ ನಿಯಮದಿಂದಾಗಿ ಅನೇಕರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಯೂ ಉಂಟಾಗಿತ್ತು. ಇದೀಗ ಈ ತೊಂದರೆ ಕೊಂಚ ಕಡಿಮೆಯಾಗಲಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ