ಬೆಂಗಳೂರು
ನಟಿ, ಸಂಸದೆ ಸುಮಲತಾ ಅಂಬರೀಷ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಸುಮಲತಾ ಸಾಂಸ್ಥಿಕ ಕ್ವಾರೆಂಟೇನ್ಗೆ ಒಳಗಾಗಿದ್ದಾರೆ.ಜುಲೈ 4ರಂದು, ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ತೊಡಗಿದ್ದರು. ಅಲ್ಲದೇ ಕೊರೋನಾ ಸಂತ್ರಸ್ತ ಪ್ರದೇಶಗಳಿಗೂ ಭೇಟಿ ನೀಡಿದ್ದರು.
ಅವರು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು ಇಂದು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಸುಮಲತಾ ಹೇಳಿದ್ದಾರೆ.ರೋಗನಿರೋಧಕ ಶಕ್ತಿಯು ತಮ್ಮಲ್ಲಿ ಪ್ರಬಲವಾಗಿದೆ. ಜತೆಗೆ ನಿಮ್ಮ ಆಶೀರ್ವಾದ ತಮ್ಮ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ತಮ್ಮನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿದ್ದೇನೆ. ತಮ್ಮನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸುವಂತೆ ಅವರು ವಿನಂತಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








