ಬಳ್ಳಾರಿ:
ತಮ್ಮ ಪ್ರಾಣದ ಹಂಗು ತೊರೆದು ಜನರ ರಕ್ಷಣೆಗಾಗಿ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗೆ ಸರಿಯಾಗಿ ಸಂಬಳ ನೀಡದ ಕಾರಣದಿಂದ ಪ್ರತಿಭಟನೆ ಮಾಡುವ ದುಸ್ಥಿತಿ ಬಂದೊದಗಿದೆ
ಬಳ್ಳಾರಿ ಜಿಲ್ಲೆಯಲ್ಲಿರುವ ವಿಮ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಸಂಬಳ ಸಿಗದ ಕಾರಣ ಕೊರೊನಾ ವಾರಿಯರ್ಸ್ ಪ್ರತಿಭಟನೆಗೆ ಇಳಿದಿದ್ದಾರೆ. ವಿಮ್ಸ್ನಲ್ಲಿ ಹೊರಗುತ್ತಿಗೆಯ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನರ್ಸ್ಗಳು ಪ್ರತಿಭಟನೆ ನಡೆಸುತ್ತಿದ್ದು, ಅವರಿಗೆ ಕಳೆದ ಆರು ತಿಂಗಳುಗಳಿಂದ ಸಂಬಳ ಸಿಕ್ಕಿಲ್ಲ. ಹೀಗಾಗಿ ಬೇಸರಗೊಂಡಿರುವ ನರ್ಸ್ಗಳು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಇನ್ನೊಂದೆಡೆ ವಿಮ್ಸ್ನಲ್ಲಿ ನರ್ಸ್ಗಳಿಗೆ ಕೊರೊನಾ ಪಾಸಿಟಿವ್ ಕಂಡು ಬಂದರೂ ಅವರ ಪ್ರಾಥಮಿಕ ಸಂಪರ್ಕ ಹೊಂದಿವರಿಂದ ಕೆಲಸ ಮಾಡಿಸಲಾಗ್ತಿದೆ ಎಂದು ಆರೋಪಿಸಲಾಗಿದ್ದು, ವಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿ ಕೊರೊನಾ ಕಿಟ್ಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹೇಳಲಾಗ್ತಿದೆ.
ಬಾಕಿ ಉಳಿಸಿರುವ ಸಂಬಳವನ್ನು ಕೂಡಲೇ ನೀಡಬೇಕೆಂದು ಪ್ರತಿಭಟನಾ ನಿರತ ನರ್ಸ್ಗಳು ಆಗ್ರಹಿಸಿದ್ದು, ದುಡ್ಡಿಲ್ಲದೆ ಜೀವನ ನಡೆಸೋಕೆ ಕಷ್ಟ ಆಗ್ತಿದೆ. ಕಳೆ ಆರು ತಿಂಗಳಿಂದ ಸಂಬಳವಿಲ್ಲದೆ ಕೆಲಸ ಮಾಡುತ್ತಾ ಬಂದಿದ್ದೇವೆ. ಇಂತಹ ಸಂಕಷ್ಟದ ಸಮಯದಲ್ಲಿ ನಮಗೆ ಸಂಬಳ ನೀಡಲೇಬೇಕೆಂದು ವಿಮ್ಸ್ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆಗೆ ಕುಳಿತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
