ಬೆಂಗಳೂರು:
ಪ್ರಥಮ ಪಿಯು ಪೂರಕ ಪರೀಕ್ಷೆ ನಡೆಸಲು ಜುಲೈ 16ರಿಂದ 27ರ ತನಕ ಪರೀಕ್ಷಾ ದಿನಾಂಕ ನಿಗದಿಯಾಗಿದೆ.
ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದ್ದು, 2019-20ನೇ ಸಾಲಿನಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಬೋರ್ಡ್ ಸೂಚನೆ ನೀಡಿದೆ.
ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ ಪರೀಕ್ಷೆ ನಡೆಸಬೇಕಾಗಿದೆ. ಹೀಗಾಗಿ ಪಿಯುಸಿ ಬೋರ್ಡ್ ಘೋಷಣೆ ಮಾಡಿದ ದಿನಾಂಕದ ಒಳಗೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಜುಲೈ 27ರ ಒಳಗೆ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಮುಗಿಸಿರಬೇಕು ಎಂದು ಪಿಯುಸಿ ಬೋರ್ಡ್ ಘೋಷಣೆ ತಿಳಿಸಿದೆ.
ಕಡ್ಡಾಯವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು :
- ಪರೀಕ್ಷೆ ಮುಗಿದ ನಂತರ ಕೇಂದ್ರದ ಕೊಠಡಿಗೆ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಸ್ಯಾನಿಟೈಸ್ ಮಾಡಿಸಬೇಕು
- ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
- ವಿದ್ಯಾರ್ಥಿಗಳಾಲಿ, ಪೋಷಕರಾಗಲಿ ಕಾಲೇಜಿನ ಸುತ್ತಮುತ್ತ ಗುಂಪು ಸೇರದಂತೆ ನೋಡಿಕೊಳ್ಳುವುದು.
- ಕಾಲೇಜಿನಲ್ಲಿ ಕಡ್ಡಾಯವಾಗಿ ಪ್ರತಿಯೊಬ್ಬ ವಿದ್ಯಾರ್ಥಿ ಮಾಸ್ಕ್ ಧರಿಸುವುದು.
- ವಿದ್ಯಾರ್ಥಿಗಳು ಕಡ್ಡಾಯವಾಗಿ ಸ್ಯಾನಿಟೈಸ್ ಬಳಸಬೇಕು.
- ಕಂಟೈನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡುವುದು.
- ಥರ್ಮಲ್ ಸ್ಕ್ಯಾನರ್ ಮೂಲಕ ಪ್ರತಿ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ಮಾಡುವುದು.
ಸೇರಿದಂತೆ ಹಲವು ಮುನ್ನೇಚ್ಚರಿಕಾ ಕ್ರಮಗಳನ್ನು ಪಿಯುಸಿ ಬೋರ್ಡ್ ಸೂಚಿಸಿದ್ದು, ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಪರೀಕ್ಷಾ ಸಿಬ್ಬಂದಿ ಕೂಡ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
