ಬೆಂಗಳೂರು :
ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ. ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಸಿಬ್ಬಂದಿಗಳಿಗೂ ಕೊರೋನಾ ವೈರಸ್ ಸೋಂಕಿನ ಪ್ರಕರಣವಲ್ಲದೇ ಸಿಎಂ ಯಡಿಯೂರಪ್ಪ ಭೇಟಿಯಾದಂತ ಅನೇಕರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದಂತ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅಲ್ಲದೇ ಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದ್ದಾರೆ. ಇದೇ ವೇಳೆ ನಿಮ್ಮ ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಸಿಎಂ ಯಡಿಯೂರಪ್ಪ ಅವರು ಹೆಚ್ ಡಿ ಕುಮಾರಸ್ವಾಮಿಯವರಿಗೂ ಸಲಹೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ