ನವದೆಹಲಿ:
ದೇಶದಲ್ಲಿ ಸೋಮವಾರ 28,701 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ದೇಶದ ವಿವಿಧೆಡೆ ಕೊರೊನಾಗೆ ಬಲಿಯಾದವರ ಸಂಖ್ಯೆ 500 ದಾಟಿದೆ.
28,701 new COVID19 cases & 500 deaths reported in India in the last 24 hours. Total positive cases stand at 8,78,254 including 3,01,609 active cases, 5,53,471
cured/discharged/migrated and 23,174 deaths: Ministry of Health pic.twitter.com/wEBpsyXnSs— ANI (@ANI) July 13, 2020
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 28,701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದೇ ದಿನ 500 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8,78,254 ಏರಿಕೆಯಾಗಿದೆ. ಸಾವಿನ ಸಂಖ್ಯೆ ಕೂಡ 23,174 ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ. ಈ ನಡುವೆ 8,78,254 ಮಂದಿ ಸೋಂಕಿತರ ಪೈಕಿ 5,53,471 ಮಂದಿ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 3,01,609 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ