ಹುಬ್ಬಳ್ಳಿ: 
ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ತೆರಳಬೇಕಿದ್ದ 200ಕ್ಕೂ ಹೆಚ್ಚು ಶಿಕ್ಷಕರು ರಸ್ತೆಬದಿಯಲ್ಲೇ ನಿಂತು ತಾಸುಗಟ್ಟಲೇ ಪರದಾಡಿದ್ದಾರೆ.ಕಳೆದ ಮೂರು ದಿನಗಳಿಂದ ಧಾರವಾಡದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದೆ. ಹುಬ್ಬಳಿಯ 200ಕ್ಕೂ ಹೆಚ್ಚು ಶಿಕ್ಷಕರು ಮೌಲ್ಯಮಾಪನ ಕೆಲಸ ನಿಮಿತ್ತ ಧಾರವಾಡದ ಸೆಂಟರ್ ಹೋಗುತ್ತಿದ್ದರು. ಆದರೀಗ ಧಾರವಾಡ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರ ಎಫೆಕ್ಟ್ ಶಿಕ್ಷಕರ ಮೇಲೂ ಬೀರಿದೆ. ಇತ್ತ ಮೌಲ್ಯಮಾಪನಕ್ಕೆ ತಪ್ಪಿಸಿಕೊಳ್ಳುವಂತಿಲ್ಲ, ಅತ್ತ ಕೆಸಲಕ್ಕೆ ಹೋಗಲೂ ಆಗದ ಸಂದಿಗ್ಧ ಪರಿಸ್ಥಿತಿಗೆ ಶಿಕ್ಷಕರು ಸಿಲುಕಿದ್ದರು.
ಇತ್ತ ಹುಬ್ಬಳ್ಳಿಯಲ್ಲಿ ಕೆಲವರು ಲಾಕ್ಡೌನ್ ಇದ್ದರೂ ಅನಗತ್ಯವಾಗಿ ಮನೆಯಿಂದ ಹೊರ ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಹಾಲು, ದಿನಸಿ, ತರಕಾರಿ ಖರೀದಿ ನೆಪದಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದ ಜನರಿಗೆ ವಾಹನಗಳನ್ನು ಸೀಜ್ ಮಾಡುವ ಮೂಲಕ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








