ನವದೆಹಲಿ :
ದೇಶದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರ ಪೈಕಿ ಕಿಲ್ಲರ್ ಕೊರೊನಾಗೆ 99 ವೈದ್ಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ವೈದ್ಯಕೀಯ ಸಂಘ ಈ ಕುರಿತು ಮಾಹಿತಿ ನೀಡಿದ್ದು, ಭಾರತದಲ್ಲಿ ಕೊರೊನಾ ವೈರಸ್ ಗೆ ಹೋರಾಡುತ್ತಿರುವ ವೈದ್ಯರ ಪೈಕಿ ಅತಿ ಹೆಚ್ಚು ವೈದ್ಯರು ಮಹಾರಾಷ್ಟ್ರದಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಹೇಳಿದೆ.
ಸಾವಿಗೀಡಾದವರಲ್ಲಿ 73 ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. 35-50 ವಯಸ್ಸಿನ ನಡುವೆ ಇರುವ 19 ಮಂದಿ ಮತ್ತು 35 ವಯಸ್ಸಿಗಿಂತ ಕಡಿಮೆ ವಯಸ್ಸಿನ 7 ಮಂದಿ ಮೃತಪಟ್ಟಿದ್ದಾರೆ. ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಎಂದು ಐಎಂಎ ವೈದ್ಯರಿಗೆ ಮತ್ತು ವೈದ್ಯಕೀಯ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದೆ. ಅದೇ ವೇಳೆ ವೈದ್ಯರು ವೈಜ್ಞಾನಿಕ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಐಎಂಎ ಹೇಳಿದೆ.
ದೇಶಾದ್ಯಂತ ಒಟ್ಟು 1302 ವೈದ್ಯರಿಗೆ ಕೊರೊನಾ ಸೋಂಕು ತಗುಲಿದ್ದು, ವಿವಿಧ ಅಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈನಲ್ಲಿ 1000 ಕ್ಕಿಂತ ಹೆಚ್ಚು ಆರೋಗ್ಯ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಮಾಹಿತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/corona.gif)