ಚಿತ್ರದುರ್ಗ:
ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿರುವ ಮುರುಘ ಮಠಕ್ಕೆ ಭಕ್ತಾದಿಗಳ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಮಠದ ಮುಖ್ಯಸ್ಥರಾದ ಡಾ.ಶಿವಮೂರ್ತಿ ಮುರುಘ ಶರಣರು ತಿಳಿಸಿದ್ದಾರೆ. ಮುರುಘ ಮಠಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿ ದ್ದರೂ ಮುರುಘ ವನಕ್ಕೆ ಭಕ್ತಾದಿಗಳ ಭೇಟಿಗೆ ಥರ್ಮಲ್ ಸ್ಕ್ರೀನಿಂಗ್ ಮೂಲಕ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ಕೊರೋನಾ ರೋಗವನ್ನು ನಿಯಂತ್ರಿಸುವುದಕ್ಕೆ ಸಾಧ್ಯವಿದೆ ಎಂದು ತಿಳಿಸಿದ್ದಾರೆ.
ನಾವು ಜವಾಬ್ದಾರಿ ಅರಿತು ಸುರಕ್ಷವಾಗಿರದೇ ಇದ್ದಲ್ಲಿ, ಕೊರೋನಾವನ್ನು ನಿಯಂತ್ರಿಸುವುದಕ್ಕೆ ಸಾಧ್ಯವಿಲ್ಲ. ರಾಜ್ಯಾದ್ಯಂತ ಹಲವು ದಿನಗಳಿಂದ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಠ ಜವಾಬ್ದಾರಿ ಅರಿತು ಈ ನಿರ್ಧಾರ ಕೈಗೊಂಡಿದೆ ಎಂದು ಶ್ರೀಗಳು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
