ಬೆಂಗಳೂರು :
ಜು.20 ಸ್ಯಾಂಡಲ್ ವುಡ್ ನ ಸರ್ಜಾ ಕುಟುಂಬದ ಅಂಗಳಕ್ಕೆ ಮತ್ತೆ ಕೊರೊನಾ ಕಾಲಿಟ್ಟಿದ್ದು, ನಟ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯ ಸರ್ಜಾ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದು ಕೊಂಡಿರುವ ಐಶ್ವರ್ಯ, ನನಗೆ ಇತ್ತೀಗಷ್ಟೇ ಕೊರೊನಾ ಇರುವುದು ಖಾತರಿಯಾಗಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ನಲ್ಲಿದ್ದೇನೆ. ನುರಿತ ವೈದ್ಯಕೀಯ ಸಿಬ್ಬಂದಿಯ ಸಲಹೆ ಮೇರೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿದ್ದೇನೆ. ಕೆಲವು ದಿನಗಳ ಹಿಂದೆ ನನ್ನೊಂದಿಗೆ ಯಾರಾದರೂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದರೆ ಜಾಗೃತವಾಗಿರಿ. ಸೂಕ್ತ ವೈದ್ಯಕೀಯ ಸೇವೆ ಪಡೆಯಿರಿ, ಮಾಸ್ಕ್ ಧರಿಸುವುದನ್ನು ಮರೆಯಬೇಡಿ’ ಎಂದು ವಿನಂತಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ನಟ ಧ್ರುವ ಸರ್ಜಾ ದಂಪತಿಗೂ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ಧೃವಾ ಮತ್ತು ಅವರ ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆಗೆ ಒಳಗಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ