ಶಿವಮೊಗ್ಗ:
ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.
ವಿದ್ಯಾನಗರದ ದುರ್ಗಮ್ಮ ದೇವಸ್ಥಾನದ ಬಳಿ ಬಿ.ಹೆಚ್.ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಬೈಕ್ ನಲ್ಲಿ ಸಾಗುತ್ತಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಗೊಂಧಿಚಟ್ನಹಳ್ಳಿಯ ನವೀನ್ (30) ಹಾಗೂ ಜಯಪ್ಪ (33) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ಉಂಬ್ಳೇಬೈಲು ಬಳಿ ಮೀನು ಹಿಡಿಯಲು ತೆರಳುತ್ತಿದ್ದರು ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ