ನವದೆಹಲಿ:
ಗುರುವಾರ ದೇಶದಾದ್ಯಂತ ದಾಖಲೆಯ 45,720 ಹೊಸ ಸೋಂಕಿತರು ಪತ್ತೆಯಾಗಿ ಒಟ್ಟು ಸೋಂಕಿತರ ಸಂಖ್ಯೆ 12,38,635 ತಲುಪಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 45,720ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 587 ಮಂದಿಯನ್ನು ಬಲಿ ಪಡೆದುಕೊಂಡಿದೆ.
ಒಂದೇ ದಿನ 1,129 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 12,38,635ಕ್ಕೆ ಹಾಗೂ ಮೃತರ ಸಂಖ್ಯೆ 29,861ಕ್ಕೆ ಏರಿಕೆಯಾಗಿದೆ.
ಈ ನಡುವೆ 12,38,635 ಮಂದಿ ಸೋಂಕಿತರ ಪೈಕಿ 7,82,606 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,26,167 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
