ತಿರುವನಂತಪುರಂ:
ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಅನಗತ್ಯ ಪ್ರಯಾಣ ನಿರ್ಬಂಧಿಸುವುದಕ್ಕಾಗಿ ಕೇರಳ ಸರ್ಕಾರ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡಿದೆ.ಇತ್ತೀಚಿನ ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದ ನಂತರ ಕೇರಳ-ತಮಿಳುನಾಡು ಮತ್ತು ಕೇರಳ-ಕರ್ನಾಟಕ ಗಡಿಗಳನ್ನು ಬಂದ್ ಮಾಡಲಾಗಿದ್ದು, ತುರ್ತು ಅಗತ್ಯಗಳಿಗೆ ಮಾತ್ರ ಗಡಿ ಪ್ರವೇಶಿಸಲು ಅವಕಾಶ ನೀಡಲಾಗಿದೆ.
ವೈದ್ಯಕೀಯ ತುರ್ತುಸ್ಥಿತಿ ಮತ್ತು ಅನಿವಾರ್ಯ ಸಾಮಾಜಿಕ ಸಂದರ್ಭಗಳನ್ನು ಹೊಂದಿರುವ ಜನರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಅವಕಾಶವಿರುತ್ತದೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಹೇಳಿದ್ದಾರೆ.
ಕೇರಳದಲ್ಲಿ ಬುಧವಾರ ಒಂದೇ ದಿನ 1038 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ಸರ್ಕಾರ ಯೋಚಿಸುವಂತೆ ಮಾಡಿತ್ತು. ಕೇರಳದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
