ಸಿಇಟಿ ಬರೆಯುವ ಸೋಂಕಿತ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ : ಡಿಸಿಎಂ

ಬೆಂಗಳೂರು

      ರಾಜ್ಯದಲ್ಲಿ ಕೋವಿಡ್ ಪಾಸಿಟೀವ್ ದೃಢಪಟ್ಟಿರುವ 40 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದು,ಬೆಂಗಳೂರಿನಲ್ಲಿ 12 ವಿದ್ಯಾರ್ಥಿಗಳು,ಜ್ಞಾನಭಾರತಿ ಕೇಂದ್ರದಲ್ಲಿ 7,ಜಿಕೆವಿಕೆ ಕೇಂದ್ರದಲ್ಲಿ 5 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.ಇವರನ್ನು ಅವರಿದ್ದ ಸ್ಥಳದಿಂದಲೇ ಆಂಬುಲೆನ್ ನಲ್ಲಿ ಕರೆತಂದು ಪರೀಕ್ಷೆ ಬಳಿಕಚಿಕಿತ್ಸಾ ಕೇಂದ್ರ ಬಿಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

     ಸಿಇಟಿ ಪರೀಕ್ಷೆ ರಾಜ್ಯದೆಲ್ಲೆಡೆ ಆರಂಭವಾಗಿದ್ದು,ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ,ಬೆಂಗಳೂರಿನ ಎರಡು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-19 ಹಿನ್ನೆಲೆ ಯಲ್ಲಿ ಕೈಗೊಂಡಿರುವ ಎಲ್ಲ ಎಚ್ಚರಿಕೆ ಕ್ರಮಗಳನ್ನು ಪರಿಶೀಲನೆ ನಡೆಸಿದರು.ಮಲ್ಲೇಶ್ವರದ ಎಂಇಎಸ್ ಕಾಲೇಜು ಹಾಗೂ ಶೇಷಾದ್ರಿಪುರಂ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದರು.

      ರಾಜ್ಯಾದ್ಯಂತ 1,94,356 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.ಒಟ್ಟು 497 ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ 83 ಕೇಂದ್ರಗಳಲ್ಲಿ, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.ಒಟ್ಟಾರೆ ರಾಜ್ಯದಲ್ಲಿ ಕೋವಿ ಡ್ ಪಾಸಿಟೀವ್ ಬಂದಿರುವ 40 ವಿದ್ಯಾರ್ಥಿಗಳು ಇದ್ದಾರೆ.ಇದರಲ್ಲಿ ಬೆಂಗಳೂರಿನಲ್ಲಿ 12 ಮಂದಿ ಇದ್ದಾರೆ.ಜ್ಞಾನ ಭಾರತಿ ಕೇಂದ್ರದಲ್ಲಿ 7,ಜಿಕೆವಿಕೆ ಕೇಂದ್ರದಲ್ಲಿ 5 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.ಕೋವಿಡ್ ಹಿನ್ನೆಲೆಯಲ್ಲಿ 30 ಸಾವಿರ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಿಸಿಕೊಂಡಿದ್ದಾರೆ.ಹೀಗಾಗಿ ಯಾವುದೇ ಸಮಸ್ಯೆ ಆಗಿಲ್ಲ ಎಂದು ಅವರು ತಿಳಿಸಿದರು.

      ಈ ವರ್ಷ ಫಲಿತಾಂಶ ಬಂದ ನಂತರ ಕೌನ್ಸೆಲಿಂಗ್ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿಯೇ ನಡೆಸಲಾಗುವುದು.ವಿದ್ಯಾರ್ಥಿ ಮತ್ತು ಪೆÇೀಷಕರು ಸಿಇಟಿ ಘಟಕಕ್ಕೆ ಬರುವ ಅಗತ್ಯವಿಲ್ಲ. ವಿದ್ಯಾರ್ಥಿಗಳು ಕಾಲೇಜನ್ನು ಆಯ್ಕೆ ಮಾಡಿಕೊಂಡ ಮೇಲೆ ನೇರವಾಗಿ ಕಾಲೇಜಿಗೆ ಹೋಗಿ ಪ್ರವೇಶ ಪಡೆಯ ಬಹುದು ಎಂದು ಅವರು ಹೇಳಿದರು.

     ಇದೇ ವೇಳೆ ಸಿಇಟಿ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಬಳಕೆ,ಥರ್ಮೊಮೀಟರ್ ಮೂಲಕ ದೈಹಿಕ ಉಷ್ಣತೆ ಪರಿಶೀಲಿ ಸುವ ವ್ಯವಸ್ಥೆ ನೋಡಿದರು.ಸಾರಿಗೆ,ಆರೋಗ್ಯ,ಪೆÇಲೀಸ್ ಮತ್ತು ಉನ್ನತ ಶಿಕ್ಷಣ ಇಲಾಖೆಗಳೆಲ್ಲ ಸೇರಿ ಕೈಗೊಂಡಿ ರುವ ಕ್ರಮಗಳ ಬಗ್ಗೆ ಅವರು ಮೆಚ್ವುಗೆ ವ್ಯಕ್ತಪಡಿಸಿದರು.ಇದೇ ವೇಳೆ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರಲ್ಲದೆ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ಏನಾ ದರೂ ಸಮಸ್ಯೆ ಆಯತೇ? ಬಸ್ ವ್ಯವಸ್ಥೆ ಇತ್ತೆ? ಪರೀಕ್ಷಾ ಕೇಂದ್ರದಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿತೆ? ಎಂಬಿತ್ಯಾದಿ ಸಂಗತಿಗಳ ಬಗ್ಗೆ ಮಾಹಿತಿ ಪಡೆದರು.ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಕ್ರಮಗಳನ್ನು ಕೈಗೊಂಡಿದೆ.ಹೀಗಾಗಿ ಪೊಷಕರು ಮತ್ತು ವಿದ್ಯಾರ್ಥಿಗಳು ಆತಂಕಕ್ಕೆ ಗುರಿಯಾಗಬೇಕಾದ ಅಗತ್ಯವಿಲ್ಲ.ವಿದ್ಯಾ ರ್ಥಿಗಳು ನಿರಾಳವಾಗಿ ಪರೀಕ್ಷೆ ಬರೆಯಲಿ ಎಂದು ಶುಭ ಹಾರೈಸಿದರು.

     ಕೋವಿಡ್-19 ಹಿನ್ನೆಲೆ ಹಾಗೂ ಹೈಕೋರ್ಟ್ ನೀಡಿರುವ ಸೂಚನೆಯ ಅನುಸಾರ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಮಾಸ್ಕ್ ಕಡ್ಡಾಯ,ಸ್ಯಾನಿಟೈಸರ್ ಬಳಕೆ,ದೈಹಿಕ ಅಂತರ ಇತ್ಯಾದಿ ಮಾರ್ಗಸೂಚಿ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ.ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳನ್ನು ಕೂರಿಸಲಾಗಿದೆ.ಪಾಸಿಟೀ ವ್ ಬಂದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರತ್ಯೇಕ ಕೊಠಡಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.ಸರಕಾರದಿಂದ ಮಾಡಲಾಗಿರುವ ವ್ಯವಸ್ಥೆಗಳಲ್ಲಿ ಎಲ್ಲೂ ಲೋಪವಾಗಿಲ್ಲ.ವಿದ್ಯಾರ್ಥಿಗಳು ಸಂತೋಷದಿಂದ ಪರೀಕ್ಷೆ ಬರೆಯು ತ್ತಿದ್ದಾರೆಂದು ಅವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap