ಹಾಸನ :

ಇಂದು ಮಧ್ಯ ರಾತ್ರಿಯಷ್ಟೇ ಒಂದು ಕೊಲೆ ಪ್ರಕರಣ ಭೇದಿಸಿದ್ದ ಪಿಎಸ್ಐ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಪಿಎಸ್ ಐ ಕಿರಣ್ ಆತ್ಮಹತ್ಯೆಗೆ ಶರಣಾಗಿರುವ ಪಿಎಸ್ ಐ.
ಇಂದು ಮಧ್ಯ ರಾತ್ರಿಯಷ್ಟೇ ಒಂದು ಕೊಲೆ ಪ್ರಕರಣ ಭೇದಿಸಿದ್ದ ಅವರು, ಆರೋಪಿ ಬಂಧನ ಸಂಬಂಧ ಕಾರ್ಯಪ್ರವೃತ್ತರಾಗಿದ್ದರು. ನಿನ್ನೆಮಧ್ಯೆ ರಾತ್ರಿ ಕೊಲೆ ಆರೋಪಿಯನ್ನು ಬಂಧಿಸಿ ಇಂದು ಬೆಳಗ್ಗೆ ಕಾನೂನು ಪ್ರಕ್ರಿಯೆ ಮುಗಿಸಿ ಮನೆಗೆ ಬಂದು ಸಮವಸ್ತ್ರದಲ್ಲಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೇ ಚಿಕಿತ್ಸೆಗೆ ಸ್ಪಂದಿಸದ ಕಾರಣ, ಪಿಎಸ್ಐ ಕಿರಣ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣವಿನ್ನೂ ತಿಳಿದುಬಂದಿಲ್ಲ. ಆದರೆ ಎರಡು ದಿನಗಳ ಹಿಂದೆ ನಡೆದಿದ್ದ ಕೊಲೆಗಳಿಗೂ ಪಿಎಸ್ ಐ ಆತ್ಮಹತ್ಯೆಗೂ ಸಂಬಂಧವಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








