ದೇಶದಲ್ಲಿ ಒಂದೇ ದಿನ 57,118 ಮಂದಿಗೆ ಅಂಟಿದ ಕೊರೊನಾ!!!

ನವದೆಹಲಿ :

      ಭಾರತದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ ಹೊಸದಾಗಿ 57,118 ಮಂದಿಗೆ ಸೋಂಕು ದಾಖಲಾಗಿದೆ.

      ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ, ಭಾರತದಲ್ಲಿ ಒಂದೇ ದಿನ 57,118 ಮಂದಿ ಸೋಂಕಿತರು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕಿಲ್ಲರ್ ಕೊರೊನಾಗೆ ಒಂದೇ ದಿನ 764 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಮಹಾಮಾರಿಗೆ ಸಾವನ್ನಪ್ಪಿದವರ ಸಂಖ್ಯೆ 36,511 ಕ್ಕೆ ಏರಿಕೆಯಾಗಿದೆ.

Recent Articles

spot_img

Related Stories

Share via
Copy link