ಬೆಂಗಳೂರು:

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೋವಿಡ್ 19 ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿದ್ದು, ಸದ್ಯ ಅವರು ಸಿಎಂ ಬಿಎಸ್ವೈ ಇರುವ ಆಸ್ಪತ್ರೆಯಲ್ಲೇ ಕೋವಿಡ್ಗಾಗಿ ಮಾಡಲಾಗಿದ್ದ ಐಸೋಲೆಟೆಡ್ ವಾರ್ಡ್ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರಿಗೆ ಎರಡು ದಿನಗಳಿಂದ ಜ್ವರ ಕೂಡಾ ಇತ್ತು. ಈ ಹಿನ್ನೆಲೆ ವೈದ್ಯರ ಸೂಚನೆಯಂತೆ ನಗರದ ಮಣಿಪಾಲ ಆಸ್ಪತ್ರೆಗೆ ಸೋಮವಾರ ರಾತ್ರಿ ದಾಖಲಾಗಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
ಮಂಗಳವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ @siddaramaiah ನವರು ಕೊರೋನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ. https://t.co/VKMmEVXzgT
— B.S. Yediyurappa (@BSYBJP) August 4, 2020
ಮಣಿಪಾಲ ಆಸ್ಪತ್ರೆಯ ಒಂದೇ ಕಡೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಯಡಿಯೂರಪ್ಪ ಒಂದೇ ಮಹಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಕೂಡ ಮಣಿಪಾಲ ಆಸ್ಪತ್ರೆಯ 11ನೇ ಮಹಡಿಯ ಕೊಠಡಿ ಸಂಖ್ಯೆ 1166ರಲ್ಲಿ ಯಡಿಯೂರಪ್ಪ ಹಾಗೂ 1171ನೇ ಕೊಠಡಿಯಲ್ಲಿ ಸಿದ್ದರಾಮಯ್ಯ ಚಿಕಿತ್ಸೆಗೆ ದಾಖಲಾಗಿದ್ದಾರೆ.








