ನವದೆಹಲಿ:
ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಪ್ರಕರಣಗಳ ಸಂಖ್ಯೆ 2 ಮಿಲಿಯನ್(20 ಲಕ್ಷ) ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಸಚಿವಾಲಯ ಶುಕ್ರವಾರ ಬೆಳಿಗ್ಗೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 62,538 ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,27,075ಕ್ಕೆ ಹಾಗೂ ಮೃತರ ಸಂಖ್ಯೆ 41,585ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 13,78,106 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 6,07,384 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
![](https://prajapragathi.com/wp-content/uploads/2020/04/Corona-1.gif)