ಭಾರತದಲ್ಲಿ 22 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!

ನವದೆಹಲಿ:

      ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 62,064 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,15,075ಕ್ಕೆ ಏರಿಕೆಯಾಗಿದೆ. 

      ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 62,064 ಸೋಂಕಿತರು ಪತ್ತೆಯಾಗಿದ್ದು, 1,007 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 22,15,075 ಹಾಗೂ ಮೃತರ ಸಂಖ್ಯೆ 44,386ಕ್ಕೆ ಏರಿಕೆಯಾಗಿದೆ.   

     15,35,744 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 6,34,945 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link